ಈ ಕ್ಷಣ :

ಅಧಿಕಾರ ಲಾಲಸಿಗಳನ್ನು ಕೈಬಿಡಿ, ನಿಷ್ಠರಿಗೆ ಮಣೆ ಹಾಕಿ: ಯತ್ನಾಳ್-ರೇಣುಕಾಚಾರ್ಯ ರಹಸ್ಯ ಮಾತುಕತೆ

Published 16 ಮಾರ್ಚ್ 2023, 13:08 IST
Last Updated 6 ಮೇ 2023, 21:07 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

POLITICS:

ಬೆಂಗಳೂರು: ಮಹತ್ವ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾ ಚಾರ್ಯ ಹಾಗೂ ಕೇಂದ್ರದ ಮಾಜಿ ಸಚಿವ ಬಸನಗೌಡಪಾಟೀಲ್ ಯತ್ನಾಳ್ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಕೆರಳಿಸಿದೆ. ಗುರುವಾರ ವಿಕಾಸಸೌಧದಲ್ಲಿರುವ ರೇಣುಕಾಚಾರ್ಯ ಕಚೇರಿಯಲ್ಲಿ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಉಭಯ ನಾಯಕರು ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಕುರಿತು ಮಾತುಕತೆ ನಡೆಸಿರುವುದು ಹಲವು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ.

ಮೂಲಗಳ ಪ್ರಕಾರ ಸಚಿವ ಸಂಪುಟ ಪುನಾರಚನೆ ಹಾಗು ಸಚಿವರಲ್ಲಿ ಕೆಲವರಿಗೆ ಕೊಕ್ ನೀಡಿ ಹೊಸಬರಿಗೆ ಅವಕಾಶ ಕಲ್ಪಿಸಲು ಪಕ್ಷದ ಮುಖಂಡರು ಹಾಗೂ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರಿಗೆ ಮನವಿ ಮಾಡಬೇಕೆಂಬ ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿದು ಬಂದಿದೆ.

ಪಕ್ಷನಿಷ್ಠರಿಗೆ ಮಣೆ ಹಾಕಲಿ

ಈ ಹಿಂದೆ 2006 , 2008ರಿಂದ 2013 ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿರುವ ಹಿರಿಯರನ್ನು ಕೈ ಬಿಟ್ಟು ಪಕ್ಷ ನಿಷ್ಠರಿಗೆ ಮಂತ್ರಿ ಆಗುವ ಅವಕಾಶ ಕಲ್ಪಿಸುವ ಕುರಿತಾಗಿ ಮಾತುಕತೆ ನಡೆಸಿದ್ದಾರೆಂದು ಗೊತ್ತಾಗಿದೆ.

ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಸಚಿವರಾಗಿರುವವರನ್ನು ಪಕ್ಷದ ಸಂಘಟನೆಗೆ ನಿಯೋಜಿಸಬೇಕು. ಗುಜರಾತ್‍ನಂತೆ ಮುಖ್ಯಮಂತ್ರಿ ಹೊರತುಪಡಿಸಿ ಇಡೀ ಸಂಪುಟವನ್ನೇ ಬದಲಾಯಿಸಿ ಪಕ್ಷ ನಿಷ್ಠರು ಹಾಗೂ ಹೊಸಬರಿಗೆ ಅವಕಾಶ ಕೊಟ್ಟರೆ ಚುನಾವಣೆಯಲ್ಲಿ ಗೆಲ್ಲಲು ಅನುಕೂಲವಾಗುತ್ತದೆ, ಪಕ್ಷದ ಪ್ರಮುಖರ ಗಮನಕ್ಕೆ ತರಬೇಕೆಂದು ಉಭಯ ನಾಯಕರು ಪರಸ್ಪರ ಚರ್ಚೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.

ಕೆಲವು ಸಚಿವರು, ಶಾಸಕರ ಕೆಲಸ ಕಾರ್ಯಗಳನ್ನು ಮಾಡಿಕೊಡುವುದಿಲ್ಲ, ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಕುಂಟು ನೆಪ ಹೇಳುತ್ತಾರೆ, ಅಧಿಕಾರಕ್ಕಾಗಿಯೇ ಬಂದಿರುವವರನ್ನು ಮುಲಾಜಿಲ್ಲದೆ ಕಿತ್ತು ಹಾಕಬೇಕು, ಸರ್ಕಾರಕ್ಕೂ ಮತ್ತು ಸಂಘಟನೆಗೆ ಇವರ ಕೊಡುಗೆಯೂ ಅಷ್ಟಕ್ಕಷ್ಟೇ. ಇಂತಹವರಿಗೆ ಕೊಕ್ ನೀಡಲು ಮುಖ್ಯಮಂತ್ರಿಗೆ ಮನವಿ ಮಾಡಬೇಕೆಂಬ ತೀರ್ಮಾನಕ್ಕೂ ಸಹ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬದಲಾವಣೆಗೆ ಮನವಿ

ಕೆಲವು ಸಚಿವರ ಅತಿಯಾದ ವರ್ತನೆಯಿಂದಲೇ ಇತ್ತೀಚೆಗೆ ನಡೆದ ಉಪ ಚುನಾವಣೆ ಮತ್ತು ವಿಧಾನಪರಿಷತ್ ಚುನಾವಣೆಯಲ್ಲಿ ಹಿನ್ನೆಡೆಯಾಯಿತು, ಪಕ್ಷ ನಿಷ್ಠರನ್ನು ಕಡೆಗಾಣಿಸಿದರ ಪರಿಣಾಮ ಕಾರ್ಯಕರ್ತರೂ ಸಹ ಬೇಸರಗೊಂಡಿದ್ದಾರೆ, ಕೆಲವರು ಸಂಪುಟದಲ್ಲಿ ಇರುವುದು ಪಕ್ಷ ಮತ್ತು ಸರ್ಕಾರದ ದೃಷ್ಟಿಯಿಂದ ಒಳ್ಳೆಯದಲ್ಲ ತಕ್ಷಣವೇ ಬದಲಾವಣೆ ಮಾಡಲು ಪಕ್ಷದ ಮುಖಂಡರಿಗೂ ಮನವಿ ಮಾಡಲು ತೀರ್ಮಾನಿಸಲಾಗಿದೆ.

ಸಂಪುಟ ಪುನರ್ ರಚನೆಯಾಗಲಿ

ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಪಾಟೀಲ್ ಯತ್ನಾಳ್, ಪಕ್ಷದ ಹೈಕಮಾಂಡ್ ಯಾವ ರೀತಿ ಬದಲಾವಣೆ ಮಾಡುತ್ತದೆ ಎಂಬುದನ್ನು ಕಾದು ನೋಡೋಣ. ಗುಜರಾತ್ ಮಾದರಿಯಲ್ಲಿ ಮಾಡುತ್ತೋ ಅಥವಾ ಕರ್ನಾಟಕಕ್ಕೆ ಬೇರೆ ಮಾದರಿಯೋ ಗೊತ್ತಿಲ್ಲ. ಸಚಿವ ಸಂಪುಟ ಪುರ್ನ ರಚನೆ ಇನ್ನು 15 ದಿನಗಳಲ್ಲಿ ಆದರೆ ಒಳ್ಳೆಯದು ಎಂದರು.

ರಾಷ್ಟ್ರೀಯ ನಾಯಕರ ಭೇಟಿ

ಮಾಜಿ ಸಚಿವ ರೇಣುಕಾಚಾರ್ಯ, ಪದೇ ಪದೇ ಅಧಿಕಾರವಹಿಸಿರುವವರನ್ನು ಹಾಗೂ ಸ್ವಾರ್ಥಕೋರರನ್ನು ಕೈ ಬಿಡಬೇಕು, ನಾವು ಯಾರ ಹೆಸರನ್ನೂ ಕೂಡ ಹೇಳುವುದಿಲ್ಲ. ಅಗತ್ಯವಿದ್ದರೆ ರಾಷ್ಟ್ರೀಯ ನಾಯಕರನ್ನ ಭೇಟಿ ಮಾಡುತ್ತೇವೆ ಜೊತೆಗೆ ಸಿಎಂ ಬಸವರಾಜಬೊಮ್ಮಾಯಿ ಅವರ ಜೊತೆಗೆ ಈ ಬಗ್ಗೆ ಚರ್ಚೆ ನಡೆಸುತ್ತೇವೆ, ಇದರಲ್ಲಿ ನಮಗೆ ಯಾವ ಸಂಕೋಚವೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45