ಈ ಕ್ಷಣ :

ವಿಧಾನ ಪರಿಷತ್ ಚುನಾವಣೆಯಲ್ಲಿ ದುಡ್ಡು ಕೊಟ್ಟರಷ್ಟೇ ವೋಟ್ ಹಾಕ್ತಾರೆ ಎಂಬುದು ಸುಳ್ಳು: ಬಿಜೆಪಿ ಅಭ್ಯರ್ಥಿ ನವೀನ್

Published 16 ಮಾರ್ಚ್ 2023, 12:54 IST
Last Updated 6 ಮೇ 2023, 21:07 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

POLITICS:

ದಾವಣಗೆರೆ: ದುಡ್ಡು ಕೊಟ್ಟರಷ್ಟೇ ವೋಟ್ ಹಾಕ್ತಾರೆ ಎಂಬುದು ಸುಳ್ಳು ಎಂದು ಚಿತ್ರದುರ್ಗ - ದಾವಣಗೆರೆ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಕೆ. ಎಸ್. ನವೀನ್ ಹೇಳಿದ್ದಾರೆ. ಜಿಎಂಐಟಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ಬಾರಿ ಅಲ್ಪ ಮತಗಳ ಅಂತರದಲ್ಲಿ ಸೋತಿದ್ದೆ. ಈ ವೇಳೆ 2429 ಮತಗಳು ಬಂದಿದ್ದವು. ಈ ಬಾರಿ ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಮತದಾರರನ್ನು ಮನೆ ಬಾಗಿಲಿಗೆ ಮತ್ತು ಹೊಲಗಳಿಗೆ ಹೋಗಿ ಭೇಟಿ ಮಾಡಿ ಮತಯಾಚಿಸಿದ್ದೇನೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಸದಸ್ಯರಿಗೆ ಹೇಗೆ ಕೆಲಸ ಮಾಡಬೇಕು, ಯಾವ ಪ್ರಶ್ನೆ ಕೇಳಬೇಕು, ಹೇಗೆಲ್ಲಾ ಅನುದಾನ ಸದ್ಭಳಕೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಮನದಟ್ಟು ಮಾಡಿಕೊಡುವ ಸಲುವಾಗಿ ಜನ ಸೇವಕ, ಗ್ರಾಮ ಸ್ವರಾಜ್ ಎಂಬ ವಿನೂತನ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದೇವೆ. ಈ ಬಾರಿ ಹಲವು ಯುವಕರು ಮೊದಲ ಬಾರಿಗೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆ ಆಗಿದ್ದಾರೆ. ಅವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬರುವ ಅನುದಾನವನ್ನು ಪಿಡಿಒ ಹಾಗೂ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಹೇಗೆ ಸದ್ಭಳಕೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ತರಬೇತಿ ನೀಡಿದ್ದೇವೆ. ಈ ಹಿನ್ನೆಲೆಯಲ್ಲಿ ಮತದಾರರು ನನ್ನನ್ನು ಈ ಬಾರಿ ಗೆಲ್ಲಿಸಲಿದ್ದಾರೆ ಎಂಬ ಎಂದು ಹೇಳಿದರು.

ವಿಧಾನಪರಿಷತ್ ಚುನಾವಣೆಯಲ್ಲಿ ಹಣ ಕೊಟ್ಟರಷ್ಟೇ ಬೆಂಬಲಿಸುತ್ತಾರೆ ಎಂಬ ಮಾತು ಸರಿಯಲ್ಲ. ಗ್ರಾಮ ಪಂಚಾಯಿತಿ ಸದಸ್ಯರು ವಿಶ್ವಾಸಕ್ಕೆ ಬೆಲೆ ಕೊಡುತ್ತಾರೆ. ಮೇಲ್ನೋಟಕ್ಕೆ ಹಣದ ಮೇಲೆ ಚುನಾವಣೆ ನಡೆಯುತ್ತದೆ ಎಂಬ ಮಾತಿದ್ದರೂ ಪ್ರೀತಿ, ವಿಶ್ವಾಸ, ಯಾವ ರೀತಿಯಲ್ಲಿ ಕೆಲಸ ಮಾಡುತ್ತಾರೆ ಎಂಬ ಆಧಾರದಲ್ಲಿ ಮತ ಹಾಕುತ್ತಾರೆ. ಈ ಬಾರಿ ಒಳ್ಳೆಯ ವಾತಾವರಣ ಇದೆ. ಚಿತ್ರದುರ್ಗ - ದಾವಣಗೆರೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಬಳಿಕ ಕೈಗೆ ಸಿಗುವುದಿಲ್ಲ ಎಂದು ಗ್ರಾಮ ಪಂಚಾಯಿತಿ ಸದಸ್ಯರೇ ಹೇಳುತ್ತಿದ್ದಾರೆ. ಈ ಬಾರಿಯೂ ಬೆಂಗಳೂರಿನಿಂದ ಕರೆ ತಂದು ಇಲ್ಲಿ ಕಾಂಗ್ರೆಸ್ ನವರು ಸ್ಪರ್ಧೆಗಿಳಿಸಿದ್ದಾರೆ. ಈ ಬಾರಿ ಗೆಲುವು ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ ಹಾಗೂ ನನ್ನ ನಡುವೆ ಯಾವುದೇ ರೀತಿಯ ಮನಸ್ತಾಪ ಇರಲಿಲ್ಲ. ಈಗಲೂ ಇಲ್ಲ. ಕಳೆದ ಬಾರಿ ನಾನು ಸ್ಪರ್ಧೆ ಮಾಡಿದಾಗ ಎರಡೂ ಜಿಲ್ಲೆಗಳಿಂದ 11 ಶಾಸಕರ ಪೈಕಿ ಏಕೈಕ ಬಿಜೆಪಿ ಶಾಸಕರಿದ್ದರು. ಆದ್ರೆ, ಈ ಬಾರಿ 8 ಶಾಸಕರು, ಇಬ್ಬರು ಸಂಸದರು, ಸಚಿವರು ಇದ್ದು, ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ನಾವು ತಾಲೂಕಿನಲ್ಲಿ ಸಮಾವೇಶ ಮಾಡುತ್ತಿಲ್ಲ. 50 ಸದಸ್ಯರಿದ್ದರೂ ಅವರನ್ನು ಭೇಟಿಯಾಗಿ ಮತಯಾಚನೆ ಮಾಡುತ್ತಿದ್ದೇವೆ ಎಂದು ನವೀನ್ ಹೇಳಿದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45