POLITICS:
ಬೆಂಗಳೂರು: ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಮರೆಯುತ್ತಿದೆ, ಇದನ್ನು ಖಂಡಿಸಿ ಸಾರಿಗೆ ಸಚಿವ ಬಿ ಶ್ರೀರಾಮುಲು ಅವರ ಬಳ್ಳಾರಿ ನಿವಾಸದ ಬಳಿ ಮಾರ್ಚ್ 28 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2020 ರಲ್ಲಿ ನಡೆದ ಸಾರಿಗೆ ಮುಷ್ಕರದ ಸಮಯದಲ್ಲಿ ಸರ್ಕಾರ ನೀಡಿದ್ದ ಒಂಬತ್ತು ಲಿಖಿತ ಭರವಸೆಗಳನ್ನು ಈಡೇರಿಸಿಲ್ಲ ಮುಖ್ಯವಾಗಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರ ಆರನೇ ವೇತನ ಆಯೋಗದ ವೇತನ ನಿಗದಿ ಮಾಡಲು ಮೂರು ತಿಂಗಳ ಕಾಲಾವಕಾಶ ಕೇಳಿತ್ತು.
ಗಡವು ಮೀರಿದರು ಬೇಡಿಕೆ ಈಡೇರಲಿಲ್ಲ ಎಂದು ಆರೋಪಿಸಿದ್ದಾರೆ. ಮಾರ್ಚ್ 27ರೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ, 28ರಿಂದ ಸಚಿವರ ಮನೆಯ ಮುಂದೆ ಸಾವಿರಾರು ನೌಕರರು ಉಪವಾಸ ಕೋರುತ್ತೇವೆ ಎಂದು ಹೇಳಿದ್ದಾರೆ.