POLITICS:
Mekedatu Politics: ಬೆಂಗಳೂರು: ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ʼಸುಳ್ಳಿನ ಸರಮಾಲೆʼಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುವ ʼರಾಜಕೀಯ ಹುಂಬತನʼವಲ್ಲದೆ ಮತ್ತೇನೂ ಅಲ್ಲ. ಸತ್ಯಕ್ಕೆ ಸಮಾಧಿ ಕಟ್ಟಿ ʼಶ್ರೀ ಚಾಮರಾಜೇಶ್ವರನ ಸನ್ನಿಧಿಯಲ್ಲಿ ಸಿದ್ದಹಸ್ತರು ʼಸತ್ಯʼ ನುಡಿಯಬೇಕಿತ್ತು. ಆದರೆ, ಆ ಶಿವನ ಶಿರದಲ್ಲಿ ನೆಲೆನಿಂತ ಗಂಗೆಯ ಸಾಕ್ಷಿಯಾಗಿ ʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ.(H D KumarSwamy)ಎಂದು ಹೇಳಿದ್ದಾರೆ. ಈ ಸಂಬಂಧ ಸೋಮವಾರ 12 ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Against Siddaramaiah) ವಿರುದ್ಧದ ವಾಗ್ದಾಳಿ ಮುಂದುವರಿಸಿದ್ದಾರೆ.(Verbal Attack)
1989ರಲ್ಲಿ ತಮಿಳುನಾಡು ಒತ್ತಡಕ್ಕೆ ಮಣಿದು ವಿ.ಪಿ.ಸಿಂಗ್ ಸರಕಾರ(V.P.Singh Government) ಕಾವೇರಿ ಟ್ರಿಬ್ಯೂನಲ್ ರಚಿಸಿತ್ತು. ಆಗ ವೀರೇಂದ್ರ ಪಾಟೀಲರು ಸಿಎಂ ಆಗಿದ್ದರೆ, ಪುಟ್ಟಸ್ವಾಮಿ ಗೌಡರು ನೀರಾವರಿ ಮಂತ್ರಿ. ಈ ಟ್ರಿಬ್ಯೂನಲ್ ಬೇಡವೇ ಬೇಡ ಎಂದು ದನಿಯೆತ್ತಿದ ಏಕೈಕ ನಾಯಕರು ದೇವೇಗೌಡರು(H.D.Deve Gowda). ಆದರೆ, ಅವರ ಮಾತನ್ನು ಯಾರೂ ಕೇಳಲಿಲ್ಲ ಎಂದು ಹೇಳಿದ್ದಾರೆ.
ಈಗ ʼಮಿ.ಸುಳ್ಳಯ್ಯʼ ಹೊಸ ಕಥೆ, ಚಿತ್ರಕಥೆ ಬರೆದಿದ್ದಾರೆ. 1968ರಲ್ಲೇ ಮೇಕೆದಾಟು(Mekedatu Project) ಯೋಜನೆಗೆ ಕಾಂಗ್ರೆಸ್ ಪ್ರಯತ್ನಿಸಿತ್ತಂತೆ ಎಂದು ಹೇಳಿದ್ದಾರೆ. 2017ರಲ್ಲೇ ಕಾಂಗ್ರೆಸ್ ಸರಕಾರ DPR (Congress Governmet) ಸಿದ್ಧಪಡಿಸಿ 5,912 ಕೋಟಿ ರೂ. ಯೋಜನಾ ವೆಚ್ಚ ನಿಗದಿ ಮಾಡಿತ್ತು. ಸಮ್ಮಿಶ್ರ ಸರಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಮತ್ತೆ 9 ಸಾವಿರ ಕೋಟಿ ರೂ. ಮೊತ್ತದ ವಿಸ್ತೃತ DPR ಸಿದ್ಧಪಡಿಸಿ ಕೇಂದ್ರಕ್ಕೆ (Central Government)ಕಳುಹಿಸಿದ್ದರಂತೆ ಎಂದು ಕುಮಾರಸ್ವಾಮಿ ತಮ್ಮ ಟ್ವೀಟ್ ಗಳಲ್ಲಿ ಹೇಳಿಕೊಂಡಿದ್ದಾರೆ.
ಚಾಮರಾಜನಗರದ ಶ್ರೀ ಚಾಮರಾಜೇಶ್ವರನ ಸನ್ನಿಧಿಯಲ್ಲಿ ಸಿದ್ದಹಸ್ತರು ʼಸತ್ಯʼ ನುಡಿಯಬೇಕಿತ್ತು. ಆದರೆ, ಆ ಶಿವನ ಶಿರದಲ್ಲಿ ನೆಲೆನಿಂತ ಗಂಗೆಯ ಸಾಕ್ಷಿಯಾಗಿ ʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ. ತಪ್ಪಿಗೆ ಪ್ರಾಯಶ್ಚಿತ್ತ ತಪ್ಪಿದ್ದಲ್ಲ ಎಂದೂ ಅವರೂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.