POLITICS:
ಬೆಂಗಳೂರು: ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ಹಾವೇರಿ ಜಿಲ್ಲಾ ಹಂಗಾಮಿ ಅಧ್ಯಕ್ಷರನ್ನಾಗಿ ಜಯಾನಂದ ಜಾವಣ್ಣನವರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಕೆ.ಕುಮಾರಸ್ವಾಮಿ ಅವರು ಈ ನೇಮಕ ಮಾಡಿದ್ದಾರೆ.