POLITICS:
ಬಳ್ಳಾರಿ/ಬೆಂಗಳೂರು: ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಒಂದೆಲ್ಲ ಒಂದು ವಿಷಯಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಇದೀಗ ಅವರು ಬಳ್ಳಾರಿಯಲ್ಲಿ ಮತ್ತೆ ರಂಪಾಟ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ, ಆತನ ಕಾರು ಚಾಲಕ , ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾರೆ.ನಿನ್ನೆ ತಡರಾತ್ರಿ ಯಲಹಂಕದ ಕ್ಲಬ್ ನಲ್ಲಿ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ಸಿದ್ದು ಕಾಂಗ್ರೆಸ್ ನಾಯಕರಿಗೆ ದೂರು ನೀಡಿದ್ದಾರೆ ಎಂಬ ಕೇಳಿಬಂದಿತ್ತು.
ಆದರೆ ಇದೀಗ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ನನ್ನ ಮೇಲೆ ಯಾವುದೇ ಹಲ್ಲೆಯಾಗಿಲ್ಲ ಎಂದು ತಿಳಿಸಿದ್ದಾರೆ. ನನ್ನ ಮೇಲೆ ಯಾರೂ ಹಲ್ಲೆ ಮಾಡಿಲ್ಲ. ಇದೆಲ್ಲ ಸತ್ಯಕ್ಕೂ ದೂರವಾದದ್ದು, ಅಂದು ನಾನು JW ಮ್ಯಾರೇಟ್ ಹೋಟೆಲ್ ಹೋಗಿದ್ದು ನಿಜ, ಅಲ್ಲಿ ಪೂರ್ವಭಾವಿ ಸಭೆ ಮುಗಿಸಿಕೊಂಡು ಹೊರಟೆ.
ಆದರೆ ಆನಂತರ ನಲಪಾಡ್ ಕಡೆಯವರು ನನಗೆ ಬೆದರಿಕೆ ಯಾವುದೇ ಹಾಕಿಲ್ಲ. ವಾಟ್ಸಪ್ ನಲ್ಲಿ ಹರಿದಾಡುತ್ತಿರುವ ಫೋಟೋ ನನ್ನದಲ್ಲ. ನಾನು ಚೆನ್ನಾಗಿಯೇ ಇದ್ದೇನೆ. ಯಾಕೆ ಈ ರೀತಿ ಸುದ್ದಿ ಹಬ್ಬಿದೆಯೋ ಗೊತ್ತಿಲ್ಲ. ನಾನೇ ಸುದ್ದಿ ಹಬ್ಬಿಸಿರೋದೇ ಆಗಿದ್ದರೆ ನನ್ನ ಹೆಸರು, ಡಿಸಿಗ್ನೇಷನ್ ಸಹಿತ ಮೆಸೇಜ್ ಮಾಡಿ ಹರಿಬಿಡುತ್ತಿರಲಿಲ್ಲ. ಇದೆಲ್ಲ ಸುಳ್ಳು ಎಂದಿದ್ದಾರೆ.
ಇನ್ನು ಈ ಬಗ್ಗೆ ನಲಪಾಡ್ ಪ್ರತಿಕ್ರಿಯೆ ನೀಡಿದ್ದು ಘಟನೆ ನಡೆದಾಗ ನಾನು ಅಲ್ಲಿ ಇರಲಿಲ್ಲ. ಈ ಘಟನೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.