POLITICS:
ನವದೆಹಲಿ: ಭಾರತ ರತ್ನ ಲತಾ ಮಂಗೇಶ್ಕರ್(92) ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ ಎರಡು ದಿನಗಳ ಕಾಲ ಶೋಕಾಚರಣೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಈ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಅರ್ಥಪಟ್ಟಕ್ಕೆ ಹಾರಿಸಲಾಗುವುದು. ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ವಿಧಿವಿಧಾನಗಳನ್ನು ನೇರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.
ಲತಾ ಮಂಗೇಶ್ಕರ್ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದು, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.