POLITICS:
ಕೊಲ್ಲಾಪುರ: ಬೆಂಗಳೂರು - ಪುಣೆ ನಡುವೆ ಹೊಸ ಹೆದ್ದಾರಿ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಹೆದ್ದಾರಿ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಹಾಲಿ ಪುಣೆ- ಬೆಂಗಳೂರು ರಸ್ತೆ 775 ಕಿ. ಮೀ ಉದ್ದವಿದ್ದು ಮಳೆಗಾಲದಲ್ಲಿ ಮುಳುಗಡೆಯಾಗುತ್ತದೆ ಯಾವುದೇ ಸಂದರ್ಭದಲ್ಲೂ ಮುಳುಗಡೆಯಾಗದ ರೀತಿಯ ವಿನ್ಯಾಸವನ್ನು ಹೊಸ ಹೆದ್ದಾರಿ ಹೊಂದಿರಲಿದೆ ಎಂದು ಸಾಂಗ್ಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಘೋಷಣೆ ಮಾಡಿದ್ದಾರೆ.
ಹೊಸ ಹೆದ್ದಾರಿ ಬೆಳಗಾವಿ, ಗದಗ, ಬಾಗಲಕೋಟೆ, ಕೊಲ್ಲಾಪುರ್, ಹುಬ್ಬಳ್ಳಿ, ದಾವಣಗೆರೆ, ಚಿತ್ರದುರ್ಗ ತುಮಕೂರು ಮೂಲಕ ಬೆಂಗಳೂರನ್ನು ಸಂಪರ್ಕಿಸುತ್ತದೆ.
ಈಗ ಇರುವ ಹೆದ್ದಾರಿ ಸತಾರ, ಕೊಲ್ಲಾಪುರ, ಬೆಳಗಾವಿ, ಹುಬ್ಬಳ್ಳಿ, ಕೊಲ್ಲಾಪುರ, ಗದಗ, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ಹಾವೇರಿ ಮಾರ್ಗದ ಹೆದ್ದಾರಿ ಮೇಲಿನ ಒತ್ತಡವನ್ನು ಹೊಸ ರಸ್ತೆ ತಗ್ಗಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.