POLITICS:
ಬೆಂಗಳೂರು: ಡಿ.ಕೆ.ಶಿವಕುಮಾರ್ ಗೂಂಡಾ, ಸಿದ್ದರಾಮಯ್ಯ ಜಾತಿವಾದಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಸರಿಯಾಗಿ ಕೆಲಸ ಮಾಡಿದರೆ ಪಕ್ಷವನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಗುಡುಗಿದರು.
ಭದ್ರಾವತಿಯಲ್ಲಿ ಶನಿವಾರ ಬಿಜೆಪಿಗೆ, ಜೆಡಿಎಸ್ ಮುಖಂಡರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತಿ, ಕುಲದ ಲೆಕ್ಕಾಚಾರ ಪಕ್ಕಕ್ಕಿಟ್ಟು ಕೆಲಸ ಮಾಡಬೇಕು. ಲಿಂಗಾಯುತರು, ಒಕ್ಕಲಿಗರು ಎನ್ನುತ್ತಾ ಜಾತಿ ಲೆಕ್ಕಾಚಾರಕ್ಕೆ ಅವಕಾಶ ನೀಡಬಾರದು ಎಂದರು.
ರಾಷ್ಟ್ರೀಯ ವಿಚಾರಗಳನ್ನು ಇಟ್ಟುಕೊಂಡು ಸದಾ ಮುನ್ನಡೆಯಬೇಕು. ಎಲ್ಲರೂ ಹಿಂದೂಗಳು, ಹಿಂದುತ್ವ ಗೆಲ್ಲಿಸುತ್ತೇವೆ ಎನ್ನಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಈಶ್ವರಪ್ಪ ಕಿವಿಮಾತು ಹೇಳಿದರು.