ಈ ಕ್ಷಣ :

ಪ್ರತಿಭಟನಾ ನಿರತ ರೈತರ ಮೇಲೆ ಹರಿದ ಕಾರು; 8 ಬಲಿ ಪಡೆದ ಯುಪಿ ಹಿಂಸಾಚಾರ, ಮಂತ್ರಿ ಮಗನ ಮೇಲೆ ಕೇಸ್

Published 16 ಮಾರ್ಚ್ 2023, 12:39 IST
Last Updated 6 ಮೇ 2023, 21:07 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

POLITICS:

ಲಕ್ನೋ: ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿಸಿದ್ದ ಪ್ರಕರಣದಲ್ಲಿ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಸೇರಿದಂತೆ ಹಲವರ ವಿರುದ್ಧ ಕೊಲೆ ಕೇಸ್ ದಾಖಲಿಸಲಾಗಿದೆ.

ನಿನ್ನೆ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರೂ ಸೇರಿ ಎಂಟು ಮಂದಿ ಸಾವಿಗೀಡಾಗಿದ್ದರು.

ರೈತರ ಪ್ರತಿಭಟನೆ ಬಗ್ಗೆ ಕಳೆದ ತಿಂಗಳು ಅತಿ ಕೆಟ್ಟದಾಗಿ ಮಾತನ್ನಾಡಿದ್ದ ಅಜಯ್ ಕುಮಾರ್ ಮಿಶ್ರಾ ವಿರುದ್ಧ ರೈತರು ತೀವ್ರ ಆಕ್ರೋಶಗೊಂಡಿದ್ದರು. ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ನಡೆದಿರುವ ರೈತರ ಪ್ರತಿಭಟನೆಯ ಬಗ್ಗೆ ಹಗುರವಾಗಿ ಪ್ರತಿಕ್ರಿಯಿಸಿದ್ದ ಮಿಶ್ರಾ, 10-15 ಮಂದಿ ಸೇರಿ ಪ್ರತಿಭಟನೆ ನಡೆಸುತ್ತಾರೆ. ಅವರನ್ನು ಸರಿದಾರಿಗೆ ತರಲು ಬರೀ ಎರಡು ನಿಮಿಷ ಸಾಕು ಎಂಬ ಮಿಶ್ರಾ ದುರಹಂಕಾರದ ಮಾತು ರೈತರನ್ನು ಕೆರಳಿಸಿತ್ತು.

ನಿನ್ನೆ ಮಿಶ್ರಾ ಮತ್ತು ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭೇಟಿ ಸಂದರ್ಭದಲ್ಲಿ ಹಿಂಸಾಚಾರ ನಡೆಯಿತು. ಮಿಶ್ರಾ ಕಾರನ್ನು ರೈತರು ಅಡ್ಡಗಟ್ಟಲು ಪ್ರಯತ್ನಿಸಿದಾಗ ಅವರ ಮೇಲೆ ಕಾರು ಹರಿಸಲಾಯಿತು ಎಂದು ಆರೋಪಿಸಲಾಗಿದೆ.

ರೈತರ ಮೇಲೆ ಕಾರು ಹರಿಸಲಾದ ಸಂದರ್ಭದಲ್ಲಿ ಕಾರಿನಲ್ಲಿ ಮಿಶ್ರಾ ಪುತ್ರ ಕೂಡ ಇದ್ದುದಾಗಿ ಆರೋಪಿಸಲಾಗಿದ್ದು, ಇದನ್ನು ಮಿಶ್ರಾ ಅಲ್ಲಗಳೆದಿದ್ದಾರೆ.

ದುರ್ಘಟನೆ ಸ್ಥಳಕ್ಕೆ ರೈತ ನಾಯಕ ರಾಕೇಶ್ ಟಿಕಾಯತ್ ಮತ್ತವರ ಬೆಂಬಲಿಗರು ತಲುಪಿದ್ದಾರೆ. ಕಾಂಗ್ರೆಸ್ ನಾಯಕಿ ಸ್ಥಳಕ್ಕೆ ಭೇಟಿ ನೋಡಲು ಹೊರಟಿದ್ದಾಗ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲಿಗೆ ಹೋಗಲು ಸಿದ್ಧರಾಗಿದ್ದ ಛತ್ತೀಸ್​ಘಡ ಸಿಎಂ ಮತ್ತು ಪಂಜಾಬ್ ಉಪಮುಖ್ಯಮಂತ್ರಿ ಭೇಟಿಗೂ ಉತ್ತರ ಪ್ರದೇಶ ಸರ್ಕಾರ ಅವಕಾಶ ನೀಡಿಲ್ಲವೆಂದು ವರದಿಯಾಗಿದೆ.

ಈ ಮಧ್ಯೆ, ರೈತರನ್ನು ಬಲಿ ತೆಗೆದುಕೊಂಡ ಘಟನೆ ಬಗ್ಗೆ ಬಿಜೆಪಿ ಸಂಸದ ವರುಣ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆಗೆ ಕಾರಣರಾದವರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಲು ಒತ್ತಾಯಿಸಿರುವುದು ಮಾತ್ರವಲ್ಲ, ಘಟನೆ ಸಂಬಂಧ ಸುಪ್ರಿಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಿಗದಿತ ಕಾಲಮಿತಿಯೊಳಗೆ ಸಿಬಿಐ ತನಿಖೆ ಆಗಬೇಕೆಂದೂ ಆಗ್ರಹಿಸಿದ್ದಾರೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45