SPECIAL:
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ಎಲ್ಲಾ ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಬಲವರ್ಧನೆಗೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ,ಜೊತೆಗೆ ಅವು ಹೊಸ ದೃಷ್ಟಿಕೋನದಿಂದ ಕಾರ್ಯಕ್ರಮ ರೂಪಿಸಿ ಜಾರಿಗೆ ತರುವ ಮೂಲಕ ಸಂಸ್ಕೃತಿ ಕಟ್ಟುವ ಕೆಲಸಕ್ಕೆ ತೊಡಗಲು ಬೇಕಾದ ಎಲ್ಲಾ ಸಹಕಾರ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಗುರುವಾರ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಅಧ್ಯಕ್ಷರು ಹಾಗೂ ರಂಗಾಯಣ ನಿರ್ದೇಶಕರು ಗಳೊಂದಿಗೆ ವಿಕಾಸ ಸೌಧದಲ್ಲಿ ಸಭೆ ನಡೆಸಿ ಮಾತನಾಡಿದರು.
ಪ್ರಾಧಿಕಾರ, ಅಕಾಡೆಮಿ ಮತ್ತು ರಂಗಾಯಣಗಳ ಹಾಗೂ ಸಂಸ್ಕೃತಿ ಇಲಾಖೆಯ ಮಧ್ಯೆ ಸುಗಮ ಸಮನ್ವಯ ಕಾರ್ಯ ನಿರ್ವಹಣೆ ಗಾಗಿ ರಾಜ್ಯದ ನಾಲ್ಕು ಉಪವಿಭಾಗ ಗಳಲ್ಲಿ ನಾಲ್ಕು ಜಂಟಿ ನಿರ್ದೇಶಕರನ್ನು ನೇಮಿಸಲಾಗುವುದು ಇದರಿಂದ ಅಧಿಕಾರ ವಿಕೇಂದ್ರೀಕರಣ ವಾಗಿ ಆಡಳಿತ ಸುಧಾರಣೆಆಗುತ್ತದೆ,ಈ ಕುರಿತು ಆದೇಶ ಹೊರಡಿಸಲು ಈಗಾಗಲೇ ನಿರ್ದೇಶನ ನೀಡುತ್ತಿದ್ದೇನೆ ಎಂದು ಅವರು ಹೇಳಿದರು.