SPECIAL: ನವದೆಹಲಿ: ಸರ್ಕಾರದ ಹೊಸ ನಿಯಮಗಳನ್ನು ಪಾಲಿಸಲು ಸಿದ್ಧವಿರುವುದಾಗಿ ಫೇಸ್‌ಬುಕ್ ಇಂದು ಹೇಳಿದೆ ಆದರೆ ಹೆಚ್ಚು ಅಗತ್ಯವಿರುವ ಕೆಲವು ವಿಚಾರಗಳನ್ನು ಚರ್ಚಿಸಬೇಕಿದೆ ಎಂದೂ ಅದು ಸ್ಪಷ್ಟಪಡಿಸಿದೆ. ಸಾಮಾಜಿಕ ಜಾಲತಾಣಗಳಿಗೆ ಸಂಬಂಧಿಸಿ ಹೊಸ ನಿಯಮಗಳ ಅನುಸರಣೆಗೆ ಕೇಂದ್ರದ ಗಡುವು ಇಂದು ಕೊನೆಗೊಳ್ಳುತ್ತದೆ. "ಐಟಿ ನಿಯಮಗಳಿಗೆ ಅನುಸಾರವಾಗಿ, ನಾವು ಕಾರ್ಯಾಚರಣೆಯ ಪ್ರಕ್ರಿಯೆಗಳನ್ನು ಕಾರ್ಯಗತಗೊಳಿಸಲು ಮತ್ತು ದಕ್ಷತೆಯನ್ನು ಸುಧಾರಿಸಲು ಕೆಲಸ ಮಾಡುತ್ತಿದ್ದೇವೆ. ನಮ್ಮ ವೇದಿಕೆಯಲ್ಲಿ ಮುಕ್ತವಾಗಿ ಮತ್ತು ಸುರಕ್ಷಿತವಾಗಿ ಅಭಿವ್ಯಕ್ತಿಸುವವರ ವಿಚಾರಕ್ಕೆ ಫೇಸ್‌ಬುಕ್ ಬದ್ಧವಾಗಿದೆ" ಎಂದು ವಕ್ತಾರರು ಹೇಳಿದ್ದಾರೆ. ಇಲ್ಲಿಯವರೆಗೆ, ಸಾಮಾಜಿಕ ಮಾಧ್ಯಮ ದೈತ್ಯ ಕಂಪೆನಿಗಳಾದ ಟ್ವಿಟರ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಹೊಸ ನಿಯಮಗಳನ್ನು ಪಾಲಿಸಿಲ್ಲ ಎಂಬುದು ಸರ್ಕಾರದ ಮೂಲಗಳ ಹೇಳಿಕೆಯಾಗಿದೆ.