ಈ ಕ್ಷಣ :

ಪ್ರವಾಸಿಗರ ಹಾಟ್ ಫೇವರಿಟ್ ಆಯ್ತು ತುಂಗಾಭದ್ರಾ ದಂಡೆ

Published 16 ಮಾರ್ಚ್ 2023, 12:27 IST
Last Updated 5 ಮೇ 2023, 00:55 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPECIAL:

ದಾವಣಗೆರೆ: ತುಂಗಾಭದ್ರಾ ನದಿ ಉಕ್ಕಿಹರಿಯುತ್ತಿದ್ದು, ಈಗ ಹರಿಹರ ಪಟ್ಟಣದಲ್ಲಿ ನೀರಿನ ಹರಿವಿನ ಸೊಬಗು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದು ಬರುತ್ತಿದೆ.

ದಾವಣಗೆರೆ ಜಿಲ್ಲೆಯ ಹರಿಹರದ ಮೂಲಕ ಹರಿಯುವ ತುಂಗಾಭದ್ರಾ ನದಿಯು ಈಗ ಪ್ರವಾಸಿಗರ ಹಾಟ್ ಫೇವರಿಟ್ ತಾಣವಾಗಿ ಮಾರ್ಪಟ್ಟಿದೆ. ಜಿಲ್ಲೆಯಲ್ಲಿ‌ ವರುಣನ ಆರ್ಭಟ ಇಲ್ಲದಿದ್ದರೂ ನೀರು ಹೆಚ್ಚಳವಾಗಿದೆ. ಶಿವಮೊಗ್ಗದ ಗಾಜನೂರು ಡ್ಯಾಂನಿಂದ ಭಾರೀ ನೀರು ಹೊರಬಿಡಲಾಗುತ್ತಿರುವುದರಿಂದ ನದಿಯು ಮೈದುಂಬಿದೆ.

ಹರಿಹರ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಿಂದ ಬರುತ್ತಿರುವ ಜನರು ಹರಿಯುವ ನದಿ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡು ಸಂತೋಷ ಪಡುತ್ತಿದ್ದಾರೆ‌. ಯುವಕರು, ಯುವತಿಯರು, ಮಹಿಳೆಯರು, ವೃದ್ಧರೂ ಸಹ ತಮ್ಮ ಮೊಬೈಲ್ ನಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳುವ ದೃಶ್ಯ ಸಾಮಾನ್ಯವಾಗಿದೆ. ಕೊರೊನಾ ಮರೆತು ಮಾಸ್ಕ್ ಧರಿಸದೇ ಜನರು ಓಡಾಡುವುದು ಆತಂಕಕ್ಕೆ ಕಾರಣವಾಗಿದೆ. ಕೋವಿಡ್ ಮಾರ್ಗಸೂಚಿ ಪಾಲನೆ ಮಾಡದಿರುವುದರಿಂದ ಕೊರೊನಾ ಹೆಚ್ಚಾಗುವ ಭೀತಿಯೂ ಶುರುವಾಗಿದೆ.

ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಒಳಹರಿವು ಹೆಚ್ಚಿರುವ ಕಾರಣ ಯಾವುದೇ ಸಮಯದಲ್ಲಿ ಜಲಾಶಯದಿಂದ ನದಿಗೆ ನೀರು ಬಿಡುವ ಸಾಧ್ಯತೆಗಳಿದ್ದು, ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಭದ್ರಾ ಜಲಾನಯ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯಕ್ಕೆ ಬರುತ್ತಿರುವ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಭದ್ರಾ ಜಲಾಶಯದ ನೀರಿನ ಗರಿಷ್ಠ ಮಟ್ಟಕ್ಕೆ ಶೀಘ್ರ ಭರ್ತಿಯಾಗುವ ಸಂಭವವಿದ್ದು, ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಯಾವುದೇ ಸಮಯದಲ್ಲಾದರೂ, ಒಳಹರಿವಿನ ಪ್ರಮಾಣಕ್ಕೆ ಅನುಗುಣವಾಗಿ ಸ್ಪಿಲ್ ವೇ ಗೇಟ್ ಮೂಲಕ ನದಿಗೆ, ಭದ್ರಾ ಬಲದಂಡೆ, ಎಡದಂಡೆ ನಾಲೆಗಳಲ್ಲಿ ಹೆಚ್ಚುವರಿ ನೀರನ್ನು ಹರಿಯಬಿಡಲಾಗುವುದು. ನದಿ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ, ಬಿ.ಆರ್.ಪ್ರಾಜೆಕ್ಟ್‍ನ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45