ಈ ಕ್ಷಣ :

ಕೋವಿಡ್ ತಂದ ಬಡತನದ ಸಂಕಟ; ಬಾಡಿಗೆ ತಾಯಂದಿರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ

Published 16 ಮಾರ್ಚ್ 2023, 12:34 IST
Last Updated 6 ಮೇ 2023, 18:20 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPECIAL:

ನವದೆಹಲಿ: ಕೊರೊನಾದಿಂದ ಪಾತಾಳಕ್ಕೆ ಆದಾಯ ಕುಸಿದ ಹಿನ್ನೆಲೆಯಲ್ಲಿ ಮಕ್ಕಳ ವಿದ್ಯಾಭ್ಯಾಸ, ದಿನ ನಿತ್ಯದ ಜೀವನ ನಿರ್ವಹಣೆಗಾಗಿ ಬಾಡಿಗೆ ತಾಯಂದಿರಾಗುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಅಧ್ಯಯನ ವರದಿಗಳು ಬಹಿರಂಗಪಡಿಸಿವೆ.

ಸಾಂಕ್ರಾಮಿಕ ಪಿಡುಗು ಹೆಚ್ಚಾದ ಬಳಿಕ ಅದರಲ್ಲೂ ಎರಡನೇ ಹಂತದ ಅಲೆಯ ಬಳಿಕ ಈ ಬೆಳವಣಿಗೆ ಕಂಡುಬಂದಿದೆ. ಹೈದರಾಬಾದ್ ನಲ್ಲಿರುವ ಇಂತಹ ಸರೋಗೆಸಿ ಕೇಂದ್ರಕ್ಕೆ ಅಂಡಾಣು ದಾನಿಗಳು ಅಥವಾ ಬಾಡಿಗೆ ತಾಯಂದಿರಾಗಲು ಬರುವವರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಹೆಚ್ಚಿದೆ ಅಲ್ಲಿನ ಉನ್ನತ ಮೂಲಗಳು ತಿಳಿಸಿವೆ.

ಈ ಹಿಂದೆ ದಿನಕ್ಕೆ ಈ ಕುರಿತು ವಿಚಾರಣೆ ನಡೆಸಲು ದೂರವಾಣಿ ಕರೆ ಮಾಡುವವರ ಸಂಖ್ಯೆ ಗರಿಷ್ಠವೆಂದರೆ ಎರಡು ಇದ್ದರೆ ಈಗ ಅದು ಕನಿಷ್ಠವೆಂದರೂ ಹತ್ತು ಆಗಿದೆ ಎಂದು ಮೂಲಗಳು ವಿವರಿಸಿವೆ. ಕೇಂದ್ರವು ನಡೆಸಿದ 100 ಮಹಿಳೆಯರ ಸಮೀಕ್ಷೆಯಲ್ಲಿ ಬಹುತೇಕರು ಪತಿಯ ಆದಾಯ ಕುಸಿತದ ಕಾರಣದಿಂದಲೇ ಬಾಡಿಗೆ ತಾಯಂದಿರಾಗಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಬಾಡಿಗೆ ತಾಯಂದಿರಾಗು ಮೂಲಕ 5ರಿಂದ 6 ಲಕ್ಷ ರೂ. ಸಂಪಾದಿಸಬಹುದಾಗಿದೆ. ಅಲ್ಲದೆ ನಿರ್ದಿಷ್ಟ ಅವಧಿಗೆ ಅಂದರೆ ಗರ್ಭವತಿಯಾದ ಸಂದರ್ಭದಲ್ಲಿ ಅವರ ಪೌಷ್ಠಿಕತೆ ಸೇರಿದಂತೆ ಎಲ್ಲಾ ಔಷಧ ಮತ್ತು ಆಹಾರ ವ್ಯವಸ್ಥೆಯನ್ನು ಆಸ್ಪತ್ರೆಗಳೇ ನೋಡಿಕೊಳ್ಳುತ್ತವೆ. ಒಟ್ಟಾರೆಯಾಗಿ ಈ ಪ್ರಕ್ರಿಯೆಗೆ 25 ಲಕ್ಷ ರೂ. ವೆಚ್ಚವಾಗುತ್ತದೆ. ಅದನ್ನು ಮಗು ಬಯಸಿದವರು ಭರಿಸುತ್ತಾರೆ. ಇತ್ತೀಚೆಗೆ ಇಂತಹ ಕ್ರಮದಿಂದ ಮಗುವನ್ನು ಪಡೆದವರು ಬಾಡಿಗೆ ತಾಯಿಯ ಮೊದಲ ಮಗುವಿಗೆ ಐಪಾಡ್ ನ್ನು ಉಡುಗೊರೆಯಾಗಿ ಕೂಡ ನೀಡಿದ್ದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಇದರಿಂದ ಆದಾಯ ಪಡೆಯೆಲು ಮಹಿಳೆ ಶಕ್ತವಾಗಿದ್ದರೂ ಭಾರತದಲ್ಲಿ ವಾಣಿಜ್ಯ ಉದ್ದೇಶಕ್ಕೆ ಬಾಡಿಗೆ ತಾಯಂದಿರಾಗುವುದನ್ನು ನಿಷೇಧಿಸಲಾಗಿದೆ. 2019ರಲ್ಲಿ ಸಂಸತ್ತಿನಲ್ಲಿ ಮಂಡನೆಯಾಗಿರುವ ಬಾಡಿಗೆ ತಾಯಂದಿರ ನಿಯಂತ್ರಣ ವಿಧೇಯಕದಲ್ಲಿ ತೀರಾ ಹತ್ತಿರದ ಸಂಬಂಧಿಗಳಿಗೆ ಮಾತ್ರ ಇಂತಹ ಅವಕಾಶ ಒದಗಿಸಲಾಗಿದೆ. ಆದರೆ ಇದಕ್ಕೆ ರಾಜ್ಯಸಭೆಯ ಒಪ್ಪಿಗೆ ಇನ್ನಷ್ಟೇ ಸಿಕ್ಕಬೇಕಿದೆ. ಸದ್ಯದ ಮಟ್ಟಿಗೆ ಇದು ಸುಮಾರು 400 ಮಿಲಿಯನ್ ಡಾಲರ್ ವ್ಯವಹಾರ ಎಂದು ಅಂದಾಜಿಸಲಾಗಿದೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45