ಈ ಕ್ಷಣ :

ಸೈಕ್ಲಿಂಗ್ ಕ್ರೀಡಾಪಟು ಪವಿತ್ರಾ ಕುರ್ತಕೋಟಿಗೆ ಸೈಕಲ್ ಹಸ್ತಾಂತರಿಸಿದ ಸಿಎಂ ಬಸವರಾಜ ಬೊಮ್ಮಾಯಿ

Published 16 ಮಾರ್ಚ್ 2023, 12:35 IST
Last Updated 6 ಮೇ 2023, 07:28 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPORTS:

ಬೆಂಗಳೂರು: ಗದಗ ಜಿಲ್ಲೆಯ ರಾಷ್ಟ್ರ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಕುಮಾರಿ ಪವಿತ್ರಾ ಕುರ್ತಕೋಟಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದ ಎದುರು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸೈಕಲ್ ಪ್ರದಾನ ಮಾಡಿದರು.

ನಂತರ ಮಾತನಾಡಿದ ಅವರು, ರಾಷ್ಟ್ರ ಮಟ್ಟದ ಸೈಕ್ಲಿಂಗ್ ಕ್ರೀಡಾಪಟುವಾಗಿರುವ ಪವಿತ್ರಾಗೆ ಕೇವಲ 8 ದಿನಗಳಲ್ಲಿ ಕೆನಡಾದಿಂದ ಸೈಕಲ್ ತರಿಸಿಕೊಡುವ ಕೆಲಸವನ್ನು ಯೋಜನಾ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮಾಡಿದೆ ಎಂದರು.

ಸರ್ಕಾರದ ಅನುದಾನ ಪಡೆಯದೆ ದೇಣಿಗೆ ಪಡೆದು ಇಲಾಖೆ ಈ ಕಾರ್ಯ ಮಾಡಿರುವುದಕ್ಕಾಗಿ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ಪವಿತ್ರಾ ಕುರ್ತಕೋಟಿ ಪಟಿಯಾಲದಲ್ಲಿ ಏರ್ಪಡಿಸಿರುವ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದು, ಚಿನ್ನದ ಪದಕ ಗೆಲ್ಲುವಂತಾಗಲಿ ಎಂದು ಹಾರೈಸಿದರು.

ಅಂತರರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಟ್ರಾಕ್ ನ್ನು ವಿಜಯಪುರದ ಮೇಲೊಡ್ರೋಮ್ ಶೀರ್ಘ್ರದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದರು.

ಈ ಸೈಕಲ್ ನ್ನು ಕೆನಡಾದಿಂದ ತರಿಸಲಾಗಿದೆ. ಇದರ ವೆಚ್ಚ 5 ಲಕ್ಷ ರೂಪಾಯಿ. ಈ ವೆಚ್ಚವನ್ನು ಎಂಬೆಸ್ಸೆ, ಬ್ಲಾಸಂ ಆಸ್ಪತ್ರೆ ಹಾಗೂ ಮಧುಸೂಧನ ಎಂಬುವರು ಸಿಎಸ್ ಆರ್ ನಿಧಿಯಿಂದ ಭರಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಶ್ರೀ ಅಶೋಕ್‌ ಮತ್ತು ಶ್ರೀಮತಿ ರೇಣುಕಾ ದಂಪತಿ ಮಗಳಾದ ಕು. ಪವಿತ್ರಾ ಕುರ್ತಕೋಟಿ ಇವರು, 5 ನೇ ತರಗತಿಗೆ ಸೈಕ್ಲಿಂಗ್‌ ಕ್ರೀಡೆಯಲ್ಲಿ ಪ್ರವೇಶ ಪಡೆದು ಪ್ರಥಮ ಪಿಯುಸಿ ಗೆ ವಿಡಿಎಫ್‌ಟಿ ಬಾಲಕಿಯರ ಕಾಲೇಜಿನಲ್ಲಿ ಓದುತ್ತಿದ್ದಾರೆ. ತಂದೆ ರೈತ ಕಾರ್ಮಿಕರಾಗಿದ್ದು, ತಾಯಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿ ಊಟದ ಅಡುಗೆ ಸಹಾಯಕರಾಗಿದ್ದಾರೆ. ಅತ್ಯಂತ ಬಡತನದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಕು. ಪವಿತ್ರ ಅವರಿಗೆ ಮೊದಲಿನಿಂದಲೂ ಸೈಕ್ತಿಂಗ್‌ನಲ್ಲಿ ಆಸಕ್ತಿ. ಆದರೆ ಗುಣಮಟ್ಟದ ಸೈಕಲ್‌ ಖರೀದಿಸುವ ಶಕ್ತಿ ಇಲ್ಲ. ದಾನಿಗಳ ಸಹಾಯದಿಂದ ಪವಿತ್ರ ಅವರು ಸೈಕಲ್‌ ಖರೀದಿಸಿ ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಂಡು ಬಹುಮಾನ ಗಳಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಖಾಸಗಿ ಸುದ್ದಿವಾಹಿನಿಯಲ್ಲಿ ಸ೦ದರ್ಶನದಲ್ಲಿದ್ದಾಗ ಪವಿತ್ರ ಅವರು ದೂರವಾಣಿಯಲ್ಲಿ ಮಾತನಾಡಿ ಗುಣಮಟ್ಟದ ಸೈಕಲ್‌ ಕೊಡಿಸುವಂತೆ ಮನವಿ ಮಾಡಿದ್ದರು.

ಉತ್ತಮ ಗುಣಮಟ್ಟದ ಸೈಕಲ್‌ ಕೊಡಿಸುವುದಾಗಿ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದರು. ಅದರಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರು ಕ್ರೀಡಾ ಇಲಾಖೆ ಹಾಗೂ ದಾನಿಗಳ ಸಹಕಾರದೊಂದಿಗೆ Aergon - 18 E119ಸೈಕಲ್‌ ಅನ್ನು ಖರೀದಿಸಿ ಕು. ಪವಿತ್ರ ಅವರಿಗೆ, ಮುಖ್ಯಮಂತ್ರಿಗಳ ಹಸ್ತದಿ೦ದಲೇ ಕೊಡಿಸಿದ್ದಾರೆ. ಆ ಮೂಲಕ ಪವಿತ್ರ ಕನಸು ನನಸುಗೊಳಿಸಿ ಅ೦ತರಾಷ್ಟೀಯ
ಮಟ್ಟದ ಸೈಕ್ತಿಂಗ್‌ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಪ್ರಯತ್ನಕ್ಕೆ ಸಹಕಾರ ನೀಡಿದ್ದಾರೆ.

ಪವಿತ್ರ ಅವರು ಸೈಕ್ಲಿಂಗ್‌ ಸ್ಪರ್ಧೆಯಲ್ಲಿ ಮಾಡಿದ ಸಾಧನೆ.

2018ರಲ್ಲಿ ಕುರುಕ್ಷೇತ್ರದಲ್ಲಿ ನಡೆದ ರೋಡ್‌ ಸೈಕ್ಲಿಂಗ್‌ 158.ಮಿ. ಸ್ಪರ್ಧೆಯಲ್ಲಿ 5ನೇ ಸ್ಥಾನ.
2019ರಲ್ಲಿ ಪುಣೆಯಲ್ಲಿ ನಡೆದ ರಾಷ್ಟ್ರಮಟ್ಟದ ಎಂ.ಟಿ.ಬಿ. ಸೈಕಲ್‌ ಸ್ಪರ್ಧೆಯಲ್ಲಿ 9ನೇ ಸ್ಥಾನ.
2021ರಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಎಂ.ಟಿ.ಬಿ. ಮೌಂಟೇನ್‌ ಬೈಕ್‌ ಸ್ಪರ್ಧೆಯಲ್ಲಿ 3ನೇ ಸ್ಥಾನ.
2021ರಲ್ಲಿ ಗದಗದಲ್ಲಿ ನಡೆದ ರಾಷ್ಟ್ರೀಯ ಎಂ.ಟಿ.ಬಿ. ಮೌಂಟೇನ್‌ ಬೈಕ್‌ ಸ್ಪರ್ಧೆಯಲ್ಲಿ 3ನೇ ಸ್ಥಾನ ಪಡೆದಿದ್ದಾರೆ.

ಈಗ ನ್ಯಾಶನಲ್‌ ಲೆವೆಲ್‌ ಗೇಮ್ಸ್‌ ಚಾಂಪಿಯನ್‌ ಶಿಪ್‌ಗೆ ಆಯ್ಕೆಯಾಗಿದ್ದಾರೆ. ಪಂಜಾಬ್‌ನ ಪಟಿಯಾಲದಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಟೀಮ್‌ಗೆ ಆಯ್ಕೆಯಾಗಿದ್ದು, ಈ ಕ್ಯಾಂಪಿನಲ್ಲಿ ಪಾಲ್ಗೊಳ್ಳಲು ಅಂತರಾಷ್ಟ್ರೀಯ ಮಟ್ಟದ ಸೈಕಲ್‌ ವಶ್ಯಕತೆ ಇತ್ತು. ಅದನ್ನು ಈಗ ಯುವ ಸಬಲೀಕರಣ ಸತ್ತು ಕ್ರೀಡಾ ಇಲಾಖೆಯಿಂದ ನೀಡಲಾಗಿದೆ.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ. ನಾರಾಯಣಗೌಡ, ಲೋಕೋಪಯೋಗಿ ಸಚಿವರಾದ ಸಿ ಸಿ ಪಾಟೀಲ್, ವಿ. ಸೋಮಣ್ಣ, ಎಸ್ ಟಿ ಸೋಮಶೇಖರ್, ಬಿ ಶ್ರೀ ರಾಮುಲು, ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ, ಶಾಸಕ ರವಿಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45