SPORTS:
ಟೋಕಿಯೋ: ಕನ್ನಡಿಗ ಸುಹಾಸ್ ಯತಿರಾಜ್ ಬ್ಯಾಡ್ಮಿಂಟನ್ ಫೈನಲ್ ನಲ್ಲಿ ಸೋಲನುಭವಿಸುವುದರೊಂದಿಗೆ ಬೆಳ್ಳಿ ಪದಕ್ಕೆ ತೃಪ್ತಿಪಟ್ಟರು. ಇದರೊಂದಿಗೆ ಭಾರತ ಟೋಕಿಯೋ ಒಲಿಂಪಿಕ್ಸ್ ನಲ್ಲಿ 18ನೇ ಪದಕ ಗಳಿಸಿತು.
ಫ್ರಾನ್ಸ್ ನ ಲುಕಾಸ್ ಮಜೂರ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಸುಹಾಸ್ ಮೊದಲ ಗೇಮ್ ನಲ್ಲಿ 21-15 ಅಂತರದಲ್ಲಿ ಜಯ ಗಳಿಸಿದ್ದರು ಆದರೆ ನಂತರದ ಎರಡು ಗೇಮ್ ಗಳಲ್ಲಿ ಉತ್ತಮ ಪೈಪೋಟಿ ನೀಡಿದರೂ 17-21, 15-21 ಅಂತರದಲ್ಲಿ ಪರಾಭವಗೊಂಡರು.
ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಮೊದಲ ಐಎಎಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.