ಈ ಕ್ಷಣ :

ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ: ಸಚಿವ ನಾರಾಯಣಗೌಡ

Published 16 ಮಾರ್ಚ್ 2023, 13:19 IST
Last Updated 6 ಮೇ 2023, 07:28 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPORTS:

ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿ ಅತ್ಯಾಧುನಿಕ ಗುಣಮಟ್ಟದ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಲಾಗಿದ್ದು, ಶೀಘ್ರದಲ್ಲೇ ಕ್ರೀಡಾಪಟುಗಳ ಬಳಕೆಗೆ ಅನುವು ಮಾಡಿಕೊಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ತಿಳಿಸಿದರು.

ಕಂಠೀರವ ಕ್ರೀಡಾಂಗಣದಲ್ಲಿ ನಿರ್ಮಿಸಿದ್ದ ಸಿಂಥೆಟಿಕ್ ಟ್ರ್ಯಾಕ್ ಹಾಳಾಗಿದ್ದ ಪರಿಣಾಮವಾಗಿ ಹೊಸ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಲು ಕಾಮಗಾರಿ ಆರಂಭಿಸಲಾಗಿತ್ತು. ಎರಡು ವರ್ಷಗಳಿಂದ ನಡೆದ ಸಿಂಥೆಟಿಕ್‌ ಟ್ರ್ಯಾಕ್‌ ಅಭಿವೃದ್ಧಿ ಕಾರ್ಯ ಮುಕ್ತಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಡಾ.ನಾರಾಯಣಗೌಡ ಅವರು ಇಂದು ಕ್ರೀಡಾಂಗಣಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಸಿಂಥೆಟಿಕ್ ಟ್ರ್ಯಾಕ್ ಅಳವಡಿಕೆ, ಕಾಮಗಾರಿ ಗುಣಮಟ್ಟವನ್ನು ಪರಿಶೀಲಿಸಿದರು.

ಅಥ್ಲೆಟಿಕ್ ಕ್ರೀಡಾಪಟುಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಮೆರಿಕಾದಿಂದ ತರಿಸಿದ ಹೊಸ ಸಿಂಥೆಟಿಕ್ ಟ್ರ್ಯಾಕ್‌ ಅಳವಡಿಸಲಾಗಿದೆ. ದೆಹಲಿ ಮೂಲದ Advanced Sport's Technology's ಸಂಸ್ಥೆಯು ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿ ನಡೆಸಿದ್ದು, 5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದರು.

ಕ್ರೀಡಾಪಟುಗಳಿಗೆ ನೆರವಾಗಲಿದೆ ಹೊಸ ಸಿಂಥೆಟಿಕ್ ಟ್ರ್ಯಾಕ್

ಹಳೇ ಸಿಂಥೆಟಿಕ್ ಟ್ರ್ಯಾಕ್ ಹಾಳಾಗಿದ್ದರಿಂದ ಕ್ರೀಡಾಪಟುಗಳ ಅಭ್ಯಾಸಕ್ಕೆ ಹಾಗೂ ಟೂರ್ನಿಗಳ ಆಯೋಜನೆಗೆ ಸಮಸ್ಯೆ ಆಗಿತ್ತು. ಈಗ ಹೊಸ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಿರುವುದರಿಂದ ಕ್ರೀಡಾಪಟುಗಳ ಅಭ್ಯಾಸಕ್ಕೆ, ಟೂರ್ನಿಗಳ ಆಯೋಜನೆಗೆ ಅನುಕೂಲವಾಗಲಿದೆ. ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಸೇರಿದಂತೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಕೂಟಗಳನ್ನು ಆಯೋಜಿಸಲು ಅನುಕೂಲ ಆಗಲಿದೆ. ನಮ್ಮ ಸರ್ಕಾರ ಕ್ರೀಡೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಹತ್ತಾರು ಯೋಜನೆಗಳನ್ನು ರೂಪಿಸಿದೆ ಎಂದು ತಿಳಿಸಿದರು.

ಒಲಂಪಿಕ್ಸ್ ನಲ್ಲಿ ಹೆಚ್ಚಿನ ಪದಕಗಳನ್ನು ಗೆಲ್ಲಬೇಕೆಂಬ ಗುರಿ ಹೊಂದಿದ್ದು, ಈಗಾಗಲೇ ಅಮೃತ ಕ್ರೀಡಾ ದತ್ತು ಯೋಜನೆಯಲ್ಲಿ ಕ್ರೀಡಾಪಟುಗಳಿಗೆ ವಿಶೇಷ ತರಬೇತಿ ನೀಡಲಾಗ್ತಿದೆ. ಸಿದ್ದಿಮಕ್ಕಳಲ್ಲಿರುವ ವಿಶೇಷ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ತರಬೇತಿ ನೀಡಲಾಗುತ್ತಿದೆ. ಈಗ ಹೊಸ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಿರುವುದರಿಂದ ಅಥ್ಲೆಟಿಕ್ಸ್‌ಗಳಿಗೆ ಅನುಕೂಲವಾಗಲಿದ್ದು, ಏಪ್ರಿಲ್‌ನಲ್ಲಿ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳು ಹೊಸ ಟ್ರ್ಯಾಕ್ ಉದ್ಘಾಟಿಸಲಿದ್ದಾರೆ ಎಂದು ಸಚಿವರು ಹೇಳಿದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45