ಈ ಕ್ಷಣ :

ವಿಶ್ವಟೆಸ್ಟ್ ಫೈನಲ್: ಭಾರತ 217ಕ್ಕೆ ಆಲೌಟ್

Published 15 ಮಾರ್ಚ್ 2023, 22:38 IST
Last Updated 6 ಮೇ 2023, 07:28 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPORTS: ಸೌಥ್ ಹ್ಯಾಂಪ್ಟನ್: ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ನ ಫೈನಲ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 217 ರನ್ ಗೆ ಆಲೌಟ್ ಆಯಿತು. ಮಳೆಯಿಂದಾಗಿ ಬ್ಯಾಟಿಂಗ್ ಗೆ ಕಠಿಣವೆನಿಸಿರುವ ಪಿಚ್ ನಲ್ಲಿ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ ಗಳಿಸಿರುವ ಈ ಮೊತ್ತ ಕಿವೀಸ್ ಪಡೆಗೆ ಕಠಿಣವೆನಿಸಲೂಬಹುದು. ಎರಡನೇ ದಿನದಲ್ಲಿ 146 ರನ್ ಗೆ 3 ವಿಕೆಟ್ ಕಳೆದುಕೊಂಡಿದ್ದ ಭಾರತ, ಮೂರನೇ ದಿನದ ಭೋಜವ ವಿರಾಮ ಮುಗಿಯುತ್ತಿದ್ದಂತೆ ಸರ್ವ ಪತನ ಕಂಡಿತು. ಭಾರತ 250 ರನ್ ಗಡಿ ದಾಟಿರುತ್ತಿದ್ದರೆ ಎದುರಾಳಿ ತಂಡದ ಮನೋಬಲವನ್ನು ಕುಗ್ಗಿಸಬಹುದಾಗಿತ್ತು. ಜೆಮಿಸನ್ 31 ರನ್ ಗೆ 5 ವಿಕೆಟ್ ಗಳಿಸಿ ಭಾರತದ ರನ್ ಗಳಿಕೆಗೆ ಕಡಿವಾಣ ಹಾಕಿದರು. ರವೀಂದ್ರ ಜಡೇಜಾ (15) ಅಂತಿಮ ಹಂತದಲ್ಲಿ ರನ್ ಗಳಿಸಬಹುದೆಂಬ ನಿರೀಕ್ಷೆಯೂ ಹುಸಿಯಾಯಿತು. ಎರಡನೇ ದಿನದಲ್ಲಿ 44 ರನ್ ಗಳಿಸಿ ಆಡುತ್ತಿದ್ದ ನಾಯಕ ವಿರಾಟ್ ಕೊಹ್ಲಿ (44) ಅದೇ ಮೊತ್ತಕ್ಕೆ ಪೆವಿಲಿಯನ್ ಸೇರಿದ್ದು ಭಾರತದ ದುರಾದೃಷ್ಟ. ಜೆಮಿಸನ್ ಅವರ ನಿಖರ ದಾಳಿಗೆ ಕೊಹ್ಲಿ ಎಲ್ಬಿಗೆ ಬಲಿಯಾದರು. ಆಸೀಸ್ ಪ್ರವಾಸದ ವೇಳೆ ತಂಡಕ್ಕೆ ಶ್ರೀರಕ್ಷೆಯಾಗಿದ್ದ ರಿಶಬ್ ಪಂಥ್, 20 ಎಸೆತಗಳನ್ನು ಎದುರಿಸಿದ ನಂತರ ಬೌಂಡರಿಯೊಂದಿಗೆ ಖಾತೆ ತೆರೆದು ಆತ್ಮವಿಶ್ವಾಸ ಮೂಡಿಸಿದರು. ಆದರೆ ಜಮಿಸನ್ ಅವರ ಅದೇ ಓವರ್ ನಲ್ಲಿ ನಥಾನ್ ಗೆ ಕ್ಯಾಚಿತ್ತು ನಿರಾಸೆ ಮೂಡಿಸಿದರು. ವಿಶ್ವ ಟೆಸ್ಟ್ ಸರಣಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿರುವ ಅಜಿಂಕ್ಯ ರಹಾನೆ ಫೈನಲ್ ಪಂದ್ಯದಲ್ಲೂ ತಾಳ್ಮೆಯ ಆಟ ಪ್ರದರ್ಶಿಸಿದರು. ಆದರೆ 49 ರನ್ ಗಳಿಸುವಷ್ಟರಲ್ಲೇ ವ್ಯಾಗನರ್ ಬೌಲಿಂಗ್ ನಲ್ಲಿ ಲಥಾಮ್ ಗೆ ಕ್ಯಾಚಿತ್ತು ನಿರ್ಗಮಿಸಿದರು. 117 ಎಸೆತಗಳನ್ನೆದುರಿಸಿದ ರಹಾನೆ ಅವರ ಇನ್ನಿಂಗ್ಸ್ ನಲ್ಲಿ 5 ಬೌಂಡರಿ ಸೇರಿತ್ತು. ರವಿಚಂದ್ರನ್ ಅಶ್ವಿನ್ ಅಮೂಲ್ಯವಾದ 22 ರನ್ ಕೊಡುಗೆ ನೀಡಿ ತಂಡದ ಸಾಧಾರಣ ಮೊತ್ತದಲ್ಲಿ ಪ್ರಮುಖ ಪಾತ್ರವಹಿಸಿದರು. ಸಂಕ್ಷಿಪ್ತ ಸ್ಕೋರ್: ಭಾರತ ಪ್ರಥಮ ಇನ್ನಿಂಗ್ಸ್ (92.1 ಓವರ್ ಗಳಲ್ಲಿ 217) ವಿರಾಟ್ ಕೊಹ್ಲಿ – 44, ಅಜಿಂಕ್ಯಾ ರಹಾನೆ – 49, ಆಶ್ವಿನ್ 22, ಜೆಮಿನಸ್ 31ಕ್ಕೆ 5

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45