UNCATEGORIZED: ಕಾರವಾರ: ಉತ್ತರಕನ್ನಡದಲ್ಲಿ ಇದೇ ಮೊದಲ ಬಾರಿಗೆ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ಜಿಲ್ಲೆಯ ಜನರು ಆತಂಕಕ್ಕೀಡಾಗುವಂತಾಘಿದೆ. ಜಿಲ್ಲೆಯ ದಾಂಡೇಲಿ ಸರಕಾರಿ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆಗೆ ದಾಖಲಾಗಿದ್ದ ವ್ಯಕ್ತಿಯಲ್ಲಿ ಈ ಸೋಂಕು ಪತ್ತೆಯಾಗಿದೆ. ಕೆಲವು ದಿನದ ಹಿಂದೆ ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಗೆ ಕಣ್ಣು ಊದಿಕೊಂಡಿತ್ತು. ನಂತರ ವೈದ್ಯರು ತಪಾಸಣೆ ನಡೆಸಿದ್ದು, ಬ್ಲಾಕ್ ಪಂಗಸ್ ಇರುವುದನ್ನು ದೃಢಪಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಈತನನ್ನು ಮಂಗಳೂರಿಗೆ ಕಳಿಸಲಾಗಿದೆ. ಇನ್ನೊಂದೆಡೆ, ದಾಂಡೇಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರುತ್ತಿರುವುದು ಕಾಣುತ್ತಿದೆ.