Uncategorizedರಾಮನಗರ
ಬಿಡದಿಯಲ್ಲಿ ವಾಣಿಜ್ಯ ಸಂಕೀರ್ಣ ಉದ್ಘಾಟನೆ

ರಾಮನಗರ: ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ಹೈಕಮಾಂಡ್ ಸದ್ಯ ಹೆಚ್ಚು ಬಲಶಾಲಿಯಾಗಿದ್ದು, ಇಂದಿರಾಗಾಂಧಿ ನಂತರ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಆ ರೀತಿ ಇತ್ತು ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಹೇಳಿದರು.
ರಾಮನಗರ ತಾಲ್ಲೂಕಿನ ಬಿಡದಿ ಪುರಸಭಾ ವ್ಯಾಪ್ತಿಯಲ್ಲಿ ನಗರೋತ್ಥಾನ ಹಂತ -3 ಅನುದಾನದಲ್ಲಿ 85 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿ ಬದಲಾವಣೆ ಬಿಜೆಪಿ ಹೈಕಮಾಂಡ್ ಗೆ ಬಿಟ್ಟ ವಿಚಾರ, ಆದರೆ ಕರೋನಾ ಸಂಕಷ್ಟದಲ್ಲಿ ರಾಜ್ಯ ರಾಜಕೀಯದಲ್ಲಿ ಇಂತಹ ಬೆಳವಣಿಗೆ ಅವಶ್ಯಕತೆಯಿಲ್ಲ, ಅದು ಬಿಜೆಪಿಗೆ ಸಂಬಂಧಿಸದ ವಿಚಾರವಾಗಿರುವುದರಿಂದ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.